B N Manjunatha Reddy
B N Manjunatha Reddy is the 49th Mayor of Bengaluru City. And Present,
BBMP Corporator - Madiwala Ward 172 BTM Assembly Constituency B. N. Currently B.N.
Manjunatha Reddy was the 49th Mayor of Bengaluru. He was elected from Madiwala ward belonging to BTM layout assembly constituency from Indian National Congress party. He got elected as Mayor on September 11, 2015. Mr BNM Reddy became a NSUI Member in 1983. Youth Congress President for Jayanagar Assembly from 1986-1988. Elected as Youth Conggress General Secretary for Bengaluru during the year 1993
06/02/2026
ಇಂದು ಬಿಟಿಎಂ_ಬಡಾವಣೆಯಲ್ಲಿ ಶಾಸಕರ ವಿಶೇಷ ಕ್ಷೇತ್ರ ಅನುದಾನದಲ್ಲಿ ರಸ್ತೆ & ಚರಂಡಿಗಳ ಕಾಮಗಾರಿಗೆ ಪೂಜಾ_ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಶ್ರೀ ರಾಮಲಿಂಗಾರೆಡ್ಡಿ ಸಾರಿಗೆ & ಮುಜರಾಯಿ_ಸಚಿವರು ಹಾಗೂ ಬಿಟಿಎಂ_ವಿಧಾನಸಭಾ_ಶಾಸಕರ ಮಾರ್ಗದರ್ಶನದಲ್ಲಿ ಪೂಜಾ ಕಾರ್ಯಕ್ರಮವನ್ನು ನೆರವೇರಿಸಲಾಯಿತು.
ಇಂದು ಕಾಂಗ್ರೆಸ್ ಪಕ್ಷದ ವತಿಯಿಂದ ಆಯೋಜಿಸಿದ್ದ ‘ಮನರೇಗಾ ಬಚಾವ್ ಸಂಗ್ರಾಮ್” ಅಂಗವಾಗಿ ಬೃಹತ್ ಪ್ರತಿಭಟನೆ ಹಾಗೂ ರಾಜ್ ಭವನ ಚಲೋ ಕಾರ್ಯಕ್ರಮದಲ್ಲಿ ಪಕ್ಷದ ವರಿಷ್ಠರು, ಮುಖಂಡರು, ಸಾವಿರಾರು ಕಾರ್ಯಕರ್ತರು ಭಾಗವಹಿಸಿದ್ದರು. ಕೇಂದ್ರ ಸರ್ಕಾರದವರು ಮನರೇಗಾ ಕಾಯ್ದೆ ರದ್ದುಗೊಳಿಸಿ ವಿಬಿ ಜಿ ರಾಮ್ ಜಿ ಯನ್ನು ಜಾರಿಗೊಳಿಸಿದ್ದಾರೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಜನಪರ ಚಿಂತನೆಯಿಂದ ಜಾರಿಗೊಂಡ ಮನರೇಗಾ ಯೋಜನೆಯಡಿ ಬಡವರು, ಸಣ್ಣರೈತರು, ಮಹಿಳೆಯರಿಗೆ 100 ದಿನಗಳ ಕಾಲ ಕೆಲಸವನ್ನು ಖಾತ್ರಿಪಡಿಸುತ್ತಿತ್ತು. ಬಡವರಿಗೆ ಕೆಲಸದ ಹಕ್ಕು ಸಂವಿಧಾನಬದ್ಧವಾದದ್ದು. ಆದರೆ ವಿಬಿ ಜಿ ರಾಮ್ ಜಿ ಕಾಯ್ದೆಯಿಂದ ಸಂವಿಧಾನಬದ್ಧವಾದ ಹಕ್ಕನ್ನು ಕಸಿದುಕೊಂಡಂತಾಗಿದೆ.
ಕರ್ನಾಟಕವೊಂದರಲ್ಲೇ ಸುಮಾರು 71 ಲಕ್ಷ ಜನ ಕಾರ್ಮಿಕರಿದ್ದು, ಇವರಲ್ಲಿ ಶೇ.53 ರಷ್ಟು ಮಹಿಳೆಯರು, ಶೇ. 28 ರಷ್ಟು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಠ ವರ್ಗದವರು, 5 ಲಕ್ಷ ಜನ ಅಂಗವಿಕಲ ಕಾರ್ಮಿಕರಿದ್ದಾರೆ. ಹೊಸ ಕಾಯ್ದೆಯಡಿ ಬಡ ಕೂಲಿಕಾರ್ಮಿಕರ ಕೆಲಸದ ಸ್ಥಳ ಮತ್ತು ದಿನಗಳನ್ನು ಕೇಂದ್ರ ಸರ್ಕಾರ ನಿರ್ಧಾರ ಮಾಡಲಿದೆ. ವ್ಯವಸಾಯದ 60 ದಿನಗಳು ಕೂಲಿ ಕಾರ್ಮಿಕರು ಕೆಲಸ ಮಾಡುವಂತಿಲ್ಲ. ಈ ಕಾಯ್ದೆಯಡಿ ಕೇಂದ್ರ ಸರ್ಕಾರ ಪೂರ್ಣ ಅನುದಾನ ನೀಡದೆ, ಕೇವಲ ಶೇ.60 ರಷ್ಟನ್ನು ಮಾತ್ರ ನೀಡುತ್ತಿದ್ದು, ಉಳಿದ ಶೇ. 40 ರಷ್ಟನ್ನು ರಾಜ್ಯ ಸರ್ಕಾರ ನೀಡಬೇಕಿದೆ. ಇದು ಜನರಿಗೆ ಮಾರಕವಾದ ಕಾಯ್ದೆಯಾಗಿದೆ. ಗ್ರಾಮೀಣ ಪ್ರದೇಶದ ಕಾರ್ಮಿಕರ ಕೆಲಸವನ್ನು ಕಸಿದುಕೊಂಡಂತಾಗಿದೆ.
ಇಂತಹ ಜನವಿರೋಧಿ ಕಾಯ್ದೆ ತರಲು ಕೇಂದ್ರಕ್ಕೆ ಆರ್ ಎಸ್ ಎಸ್ ಪ್ರೇರಣೆ ನೀಡಿದ್ದು, ಬಡಜನರು ಆರ್ಥಿಕವಾಗಿ ಸ್ವಾವಲಂಬಿಗಳಾಗಬಾರದು ಎಂಬುದು ಬಿಜೆಪಿ - ಆರ್ ಎಸ್ ಎಸ್ ನ ದುರುದ್ದೇಶ. ಆದ್ದರಿಂದ ಕೇಂದ್ರದ ಈ ಕಾಯ್ದೆಯನ್ನು ರದ್ದುಗೊಳಿಸಿ, ಮನರೇಗಾ ಕಾಯ್ದೆಯನ್ನು ಪುನರ್ ಸ್ಥಾಪಿಸಬೇಕೆಂದು ಹೋರಾಟ ನಡೆಸಲಾಗುತ್ತಿದೆ. ಈ ಸಂಬಂಧ ಗ್ರಾಮ, ತಾಲ್ಲೂಕು, ಜಿಲ್ಲಾ ಹಂತಗಳಲ್ಲಿಯೂ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
26/01/2026
ಸಮಸ್ತ ಜನತೆಗೆ ಗಣರಾಜ್ಯೋತ್ಸವ ದಿನಾಚರಣೆಯ ಶುಭಾಶಯಗಳು. Our heroes waged a valiant struggle so that the future generations could live their lives with dignity. This is a day to celebrate. Wishing you all a very Happy !
30/12/2025
ನಾಡಿನ ಸಮಸ್ತ ಜನತೆಗೆ ವೈಕುಂಠ ಏಕಾದಶಿಯ ಶುಭಾಶಯಗಳು. ದೇವರು ಎಲ್ಲರಿಗೂ ಆರೋಗ್ಯ, ನೆಮ್ಮದಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.

28/12/2025
“ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ - ಅಖಂಡ ಭಾರತದ ಅಸ್ಮಿತೆ”
140 ವರ್ಷಗಳ ಹಿಂದೆ ಸ್ವಾಂತಂತ್ರ್ಯಕ್ಕಾಗಿ ಹಚ್ಚಿದ ಒಂದು ಕಿಡಿ ಇಂದು ಕೋಟ್ಯಾಂತರ ಜನರ ಧ್ವನಿಯಾಗಿದೆ.
ಕಾಂಗ್ರೆಸ್ ಕೇವಲ ರಾಜಕೀಯ ಪಕ್ಷವಲ್ಲ, ಇದೊಂದು ಆಂದೋಲನ.
ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಕಾಂಗ್ರೆಸ್ ಪಕ್ಷ ಸ್ಥಾಪನೆಯಾಗಿ ಇಂದಿಗೆ 140 ವರ್ಷ.
25/12/2025
ಶಾಂತಿ, ಪ್ರೀತಿ, ದಯೆ ಮತ್ತು ಕ್ಷಮಾ ಗುಣಗಳಿಂದ ಮಾಡುವ ಜನರ ಸೇವೆಯಿಂದ ದೇವರನ್ನು ಕಾಣಲು ಸಾಧ್ಯ ಎಂಬ ಜೀಸಸ್ ಕ್ರೈಸ್ತರ ಅರ್ಥಪೂರ್ಣ ಸಂದೇಶ ನಮ್ಮೆಲ್ಲರ ಜೀವನದ ದಾರಿಗೆ ಬೆಳಕಾಗಿ ನಮ್ಮನ್ನು ಮುನ್ನಡೆಸಲಿ.
ನಾಡಿನ ಸಮಸ್ತ ಜನತೆಗೆ ಕ್ರಿಸ್ ಮಸ್ ಹಬ್ಬದ ಹಾರ್ದಿಕ ಶುಭಾಶಯಗಳು.🎄🎄
23/12/2025
ಮಾಜಿ ಪ್ರಧಾನಿ ದಿ. ಪಿ.ವಿ ನರಸಿಂಹ ರಾವ್ ಅವರ ಪುಣ್ಯಸ್ಮರಣೆಯಂದು ಅವರನ್ನು ಗೌರವಪೂರ್ವಕವಾಗಿ ಸ್ಮರಿಸಿಕೊಳ್ಳುತ್ತೇನೆ.
ನರಸಿಂಹ ರಾವ್ ಅವರ ದೂರದೃಷ್ಟಿ ಚಿಂತನೆಯಿಂದ ಕೂಡಿದ್ದ ಆರ್ಥಿಕ ಸುಧಾರಣೆಗಳ ಪರಿಣಾಮ ಭಾರತ 21ನೇ ಶತಮಾನದಲ್ಲಿ ಸಶಕ್ತ ಆರ್ಥಿಕತೆಯಾಗಿ ಹೊರಹೊಮ್ಮಲು ಸಾಧ್ಯವಾಯಿತು.
My humble Tributes to the former Prime Minister of India Shri P. V. Narasimha Rao on his death anniversary.
14/12/2025
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು, ಮಾಜಿ ಸಚಿವರು ಹಾಗೂ ಶಾಸಕರಾದ ಶ್ರೀ ಶಾಮನೂರು ಶಿವಶಂಕರಪ್ಪ ಅವರ ನಿಧನರಾದ ವಿಷಯ ತಿಳಿದು ಮನಸ್ಸಿಗೆ ಅಪಾರ ನೋವುಂಟಾಯಿತು.
ಅವರ ಸರಳತೆ, ದಶಕಗಳ ಕಾಲ ಅವರು ಮಾಡಿದ ನಿಸ್ವಾರ್ಥ ಜನಸೇವೆ ಮತ್ತು ಸಾರ್ವಜನಿಕ ಜೀವನದಲ್ಲಿ ತೋರಿದ ಮಾದರಿಯು ಸದಾ ಸ್ಮರಣೀಯವಾಗಿರುತ್ತದೆ.
ಶಿವಶಂಕರಪ್ಪ ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ ಹಾಗೂ ಭಗವಂತ ಕುಟುಂಬಸ್ಥರಿಗೆ ಮತ್ತು ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವೆ.
10/11/2025
ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಕಾರ್ ಸ್ಪೋಟದಿಂದ ಹಲವರು ಸಾವಿಗೀಡಾದ ಸುದ್ದಿ ನೋವಿನ ಜೊತೆಗೆ ದಿಗ್ಭ್ರಮೆ ಉಂಟುಮಾಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ.
Click here to claim your Sponsored Listing.
Category
Contact the public figure
Website
Address
Bangalore
560068